ಬಂದಾರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೇಕೋಟೆ, ಬೆಳ್ತಂಗಡಿ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ (ಲಿ.) ಹಾಗೂ ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ‘ಗೌಡೆರೆ ಗೌಜಿ ಗಮ್ಮತ್ 2026’ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕ ತಂಡ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದೆ.

ಅತ್ಯುತ್ತಮ ಪ್ರದರ್ಶನ ನೀಡಿದ ಮೈರೋಳ್ತಡ್ಕ ತಂಡವು ಪ್ರಥಮ ಸ್ಥಾನ ಪಡೆದು ಶಾಶ್ವತ ಫಲಕ ಹಾಗೂ ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ.




