Breaking
25 Nov 2026, Wed

ಹಿರಿಯ ನಾಗರಿಕರಿಗೆ ಆಯುಷ್ಮಾನ್, ಯಶಸ್ವಿನಿ ಯೋಜನೆಯಡಿ ಸ್ಪೆಷಲ್ ವಾರ್ಡ್ ಸೌಲಭ್ಯ ಕಲ್ಪಿಸಲು ಮನವಿ

ಬಂಟ್ವಾಳ: ಆಯುಷ್ಮಾನ್ ಮತ್ತು ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಡಿ ಆಸ್ಪತ್ರೆಗಳಲ್ಲಿ ದಾಖಲಾಗುವ ಹಿರಿಯ ನಾಗರಿಕರಿಗೆ ಸ್ಪೆಷಲ್ ವಾರ್ಡ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಸಾಮಾನ್ಯ ವಾರ್ಡ್‌ಗಳಲ್ಲಿ ದಾಖಲಾಗುವ ಹಿರಿಯ ನಾಗರಿಕರಿಗೆ ಶೌಚಾಲಯ ಬಳಕೆ ಹಾಗೂ ಇತರ ವೈಯಕ್ತಿಕ ಕೆಲಸಗಳಿಗಾಗಿ ಓಡಾಡಲು ತೊಂದರೆಯಾಗುತ್ತದೆ. ಆದ್ದರಿಂದ ಆಯುಷ್ಮಾನ್ ಮತ್ತು ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ಪಡೆಯುವ ಹಿರಿಯ ನಾಗರಿಕರಿಗೆ ಸ್ಪೆಷಲ್ ವಾರ್ಡ್ ಸೌಲಭ್ಯ ಕಲ್ಪಿಸಬೇಕು. ಈ ಸೌಲಭ್ಯವನ್ನು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಸೀಮಿತಗೊಳಿಸದೆ, ಎಲ್ಲಾ ಹಿರಿಯ ನಾಗರಿಕರಿಗೂ ವಿಸ್ತರಿಸುವಂತೆ ಸರಕಾರದಿಂದ ಸೂಕ್ತ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದ ನಿಯೋಗದಲ್ಲಿ ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಸಂಘದ ಅಧ್ಯಕ್ಷ ಸೋಮಯ್ಯ ಹನೈನಡೆ, ಗೌರವಾಧ್ಯಕ್ಷ ಶೇಷಪ್ಪ ಮಾಸ್ಟರ್, ಕಾರ್ಯದರ್ಶಿ ಶ್ರೀನಿವಾಸ್ ಖಂಡಿಗ, ಸದಸ್ಯರಾದ ಶೀನ ಮೂಲ್ಯ ಅಲ್ಲಿಪಾದೆ ಮತ್ತು ಲೋಕನಾಥ ದೇವಂದಬೆಟ್ಟು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *