ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್), ಭಾರತ ಸರ್ಕಾರದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯಡಿ ಸಾಲ ವಿತರಣೆಯಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್ಗಳ ಪೈಕಿ ನಂ. 1 ಸ್ಥಾನವನ್ನು ಪಡೆದುಕೊಂಡ ಹಿನ್ನೆಲೆಯಲ್ಲಿ ಸ್ವನಿಧಿ ಸಮ್ಮಾನ್ ಪ್ರಶಸ್ತಿ 2026ನ್ನು ತನ್ನದಾಗಿಸಿಕೊಂಡಿದೆ.
ದೇಶದಾದ್ಯಂತ ಬೀದಿ ವ್ಯಾಪಾರಿಗಳಿಗೆ ಔಪಚಾರಿಕ ಸಾಲ ಸೌಲಭ್ಯ ಒದಗಿಸುವ ಮೂಲಕ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸಲು ಬ್ಯಾಂಕ್ ನಿರಂತರವಾಗಿ ಕೈಗೊಂಡಿರುವ ಪ್ರಯತ್ನಗಳಿಗೆ ಈ ಮಾನ್ಯತೆ ಸಾಕ್ಷಿಯಾಗಿದೆ.

ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಮಾನ್ಯ ಸಚಿವರಾದ ಶ್ರೀ ಮನೋಹರ್ ಲಾಲ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾದ ಶ್ರೀ ತೋಖನ್ ಸಾಹು, ಸಚಿವಾಲಯದ ಕಾರ್ಯದರ್ಶಿ ಶ್ರೀ ಸತೇಂದ್ರ ಸಿಂಗ್ ಹಾಗೂ ಪಿಎಂ ಸ್ವನಿಧಿ ಮಿಷನ್ ನಿರ್ದೇಶಕಿ ಶ್ರೀಮತಿ ಇಶಾ ಕಾಲಿಯಾ ಉಪಸ್ಥಿತರಿದ್ದರು.
ಬ್ಯಾಂಕ್ ಆಫ್ ಬರೋಡಾ ಪರವಾಗಿ ಸರ್ಕಾರಿ ಯೋಜನೆಗಳು ಮತ್ತು ಸಹ-ಸಾಲ ವಿಭಾಗದ ಜನರಲ್ ಮ್ಯಾನೇಜರ್ ಶ್ರೀ ರಾಜ್ ಕುಮಾರ್ ಗೋಯಲ್, ಎಂಎಸ್ಎಂಇ ಬ್ಯಾಂಕಿಂಗ್ ವಿಭಾಗದ ಸಹಾಯಕ ಮಹಾಪ್ರಬಂಧಕ (ಎಜಿಎಂ) ಶ್ರೀ ರಾಕೇಶ್ ಸಿಂಗ್ ಮತ್ತು ಎಂಎಸ್ಎಂಇ ಬ್ಯಾಂಕಿಂಗ್ ವಿಭಾಗದ ಮುಖ್ಯ ವ್ಯವಸ್ಥಾಪಕ ಶ್ರೀ ನ್ಯೂಟನ್ ಕುಮಾರ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಾಧನೆಯ ಕುರಿತು ಮಾತನಾಡಿದ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ದೇಬದತ್ತ ಚಂದ್ ಅವರು, “ಸಮಾಜದ ತಳಮಟ್ಟದ ಜನರಿಗೆ ಔಪಚಾರಿಕ ಬ್ಯಾಂಕಿಂಗ್ ಸೇವೆಗಳನ್ನು ತಲುಪಿಸುವ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳನ್ನು ಸಬಲೀಕರಣಗೊಳಿಸುವ ಬ್ಯಾಂಕ್ ಆಫ್ ಬರೋಡಾದ ನಿರಂತರ ಬದ್ಧತೆಯನ್ನು ಈ ಗೌರವ ಪ್ರತಿಬಿಂಬಿಸುತ್ತದೆ.
ಬೀದಿ ವ್ಯಾಪಾರಿಗಳು ಭಾರತದ ಉದ್ಯಮಶೀಲತಾ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಅವರಿಗೆ ಸಮಯೋಚಿತವಾಗಿ ಕೈಗೆಟುಕುವ ಸಾಲ ಸೌಲಭ್ಯ ದೊರೆತರೆ ಅವರ ಜೀವನೋಪಾಯ ಮತ್ತು ವ್ಯಾಪಾರದ ಬೆಳವಣಿಗೆಗೆ ಗಣನೀಯ ಬೆಂಬಲ ದೊರೆಯುತ್ತದೆ.

ಈ ಸಾಧನೆಯು ಹಣಕಾಸು ಒಳಗೊಳ್ಳುವಿಕೆಯನ್ನು ಮತ್ತಷ್ಟು ಆಳಗೊಳಿಸುವ, ಸೂಕ್ಷ್ಮ ಉದ್ಯಮಶೀಲತೆಯನ್ನು ಉತ್ತೇಜಿಸುವ ಮತ್ತು ಹೆಚ್ಚು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವ ನಮ್ಮ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ಹೇಳಿದರು.
ಪಿಎಂ ಸ್ವನಿಧಿ ಯೋಜನೆಯಲ್ಲಿ ಭಾಗವಹಿಸುವ ಮೂಲಕ ಬ್ಯಾಂಕ್ ಆಫ್ ಬರೋಡಾ ಬೀದಿ ವ್ಯಾಪಾರಿಗಳಿಗೆ ಯಾವುದೇ ಭದ್ರತೆ/ಜಾಮೀನು ಇಲ್ಲದ ಕಾರ್ಯನಿರತ ಬಂಡವಾಳ ಸಾಲಗಳನ್ನು ಒದಗಿಸುತ್ತಿದೆ.
ಇದರಿಂದ ಅವರು ತಮ್ಮ ವ್ಯಾಪಾರವನ್ನು ಮುಂದುವರಿಸಲು ಮತ್ತು ವಿಸ್ತರಿಸಲು ಸಾಧ್ಯವಾಗುವುದರ ಜೊತೆಗೆ ಔಪಚಾರಿಕ ಸಾಲ ಇತಿಹಾಸವನ್ನೂ ನಿರ್ಮಿಸಿಕೊಳ್ಳಲು ಸಹಾಯವಾಗುತ್ತದೆ. ಸಮಗ್ರ ಆರ್ಥಿಕ ಬೆಳವಣಿಗೆ ಮತ್ತು ತಳಮಟ್ಟದ ಉದ್ಯಮಶೀಲತೆಯನ್ನು ಬಲಪಡಿಸುವ ಭಾರತ ಸರ್ಕಾರದ ದೃಷ್ಟಿಕೋನಕ್ಕೆ ಬೆಂಬಲ ನೀಡಲು ಬ್ಯಾಂಕ್ ಬದ್ಧವಾಗಿದೆ.

ಬ್ಯಾಂಕ್ ಆಫ್ ಬರೋಡಾ ಕುರಿತು 1908ರ ಜುಲೈ 20ರಂದು ಸರ್ ಮಹಾರಾಜ ಸಯಾಜಿರಾವ್ ಗಾಯಕ್ವಾಡ್ III ಅವರಿಂದ ಸ್ಥಾಪಿತವಾದ ಬ್ಯಾಂಕ್ ಆಫ್ ಬರೋಡಾ ಭಾರತದ ಪ್ರಮುಖ ವಾಣಿಜ್ಯ ಬ್ಯಾಂಕ್ಗಳಲ್ಲಿ ಒಂದಾಗಿದೆ. ಬ್ಯಾಂಕಿನ ಶೇ. 63.97ರಷ್ಟು ಪಾಲು ಭಾರತ ಸರ್ಕಾರದ ಒಡೆತನದಲ್ಲಿದೆ.
ಐದು ಖಂಡಗಳ 15 ದೇಶಗಳಲ್ಲಿ ವ್ಯಾಪಿಸಿರುವ ಸುಮಾರು 65,000 ಸಂಪರ್ಕ ಕೇಂದ್ರಗಳ ಮೂಲಕ ಹಾಗೂ ವಿವಿಧ ಡಿಜಿಟಲ್ ಬ್ಯಾಂಕಿಂಗ್ ವೇದಿಕೆಗಳ ಮೂಲಕ ಬ್ಯಾಂಕ್ ತನ್ನ 180 ಮಿಲಿಯನ್ಗಿಂತಲೂ ಹೆಚ್ಚು ಜಾಗತಿಕ ಗ್ರಾಹಕರಿಗೆ ಸೇವೆ ಒದಗಿಸುತ್ತಿದೆ. ಈ ಡಿಜಿಟಲ್ ವೇದಿಕೆಗಳು ಎಲ್ಲಾ ಬ್ಯಾಂಕಿಂಗ್ ಉತ್ಪನ್ನಗಳು ಮತ್ತು ಸೇವೆಗಳನ್ನು ಸರಳ ಹಾಗೂ ತೊಂದರೆರಹಿತ ರೀತಿಯಲ್ಲಿ ಒದಗಿಸುತ್ತವೆ.

ಬ್ಯಾಂಕಿನ ದೂರದೃಷ್ಟಿಯು ಅದರ ವೈವಿಧ್ಯಮಯ ಗ್ರಾಹಕರ ಆಶಯಗಳಿಗೆ ಹೊಂದಿಕೆಯಾಗಿದ್ದು, ಬ್ಯಾಂಕಿನೊಂದಿಗಿನ ಎಲ್ಲಾ ವ್ಯವಹಾರಗಳಲ್ಲಿ ನಂಬಿಕೆ ಮತ್ತು ಭದ್ರತೆಯ ಭಾವನೆಯನ್ನು ಮೂಡಿಸುವ ಗುರಿಯನ್ನು ಹೊಂದಿದೆ.


