ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರದ ಜನವಿರೋಧಿ ಧೋರಣೆ ಹಾಗೂ ಬೆಲೆ ಏರಿಕೆಯನ್ನು ಖಂಡಿಸಿ ಕುಕ್ಕಿಪಾಡಿ ಹಾಗೂ ಎಲಿಯನಡುಗೋಡು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಧರ್ಶನ್ ಬಜ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. ಗ್ಯಾರಂಟಿ ಯೋಜನೆಗಳ ಹೊರೆಯನ್ನು ರಾಜ್ಯದ ಜನತೆಯ ಮೇಲೆ ಹೇರಲಾಗುತ್ತಿದೆ. ಜನವಿರೋಧಿ ಧೋರಣೆ ಅನುಸರಿಸುತ್ತಿರುವ ಈ ಸರಕಾರವನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಉಪಾಧ್ಯಕ್ಷ ವಸಂತ ಅನ್ನಳಿಕೆ, ಸಂಘಬೆಟ್ಟು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ರಾಯಿಬೆಟ್ಟು, ಸಿ.ಎ. ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು, ನಿರ್ದೇಶಕರಾದ ರಾಜೇಶ್ ಶೆಟ್ಟಿ ಹಾಗೂ ಪುರುಷೋತ್ತಮ ಶೆಟ್ಟಿ, ಶಕ್ತಿ ಕೇಂದ್ರದ ಪ್ರಮುಖರಾದ ಯೋಗೀಶ್ ಆಚಾರ್ಯ, ಶೇಖರ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಲಿಂಗಪ್ಪ ಪೂಜಾರಿ, ಶ್ರೀಕಾಂತ್, ಪುಷ್ಪರಾಜ್ ಪೂಜಾರಿ, ಸಂತೋಷ್ ಶೆಟ್ಟಿ, ಹರೀಶ್ಚಂದ್ರ ಆಚಾರ್ಯ, ಪ್ರಧಾನ ಕಾರ್ಯದರ್ಶಿಗಳಾದ ಪ್ರಭಾತ್ ನಾಯಕ್, ಪ್ರವೀಣ್ ಶೆಟ್ಟಿ, ಪಂಚಾಯತ್ ಮಾಜಿ ಸದಸ್ಯರಾದ ಬೇಬಿ ದೇವಸ, ಚಂದ್ರ ಪೂಜಾರಿ, ಸುಜಾತ, ಪ್ರತಿಭಾ ಶೆಟ್ಟಿ, ಪೂರ್ಣಿಮಾ, ಪುಷ್ಪ, ಪ್ರಮುಖರಾದ ಅಮ್ಮು ಉಪ್ಪಿರ, ಮಹಾಬಲ ಶೆಟ್ಟಿ, ಹರೀಶ್ ಪೂಜಾರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.





