ಮೈಸೂರು: ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ PGRSS ನಿರಾಶ್ರಿತರು ಮತ್ತು ವೃದ್ಧರ ಬೃಂದಾವನ ಆಶ್ರಮದಲ್ಲಿ ತಾಯಂದಿರಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವರಲಕ್ಷ್ಮಿ ಹಾಗೂ ಅವರ ಕುಟುಂಬದ ಸದಸ್ಯರು ಆಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ತಾಯಂದಿರೊಂದಿಗೆ ಆತ್ಮೀಯವಾಗಿ ಸಮಯ ಕಳೆದರು. ಬಳಿಕ ಹಣ್ಣುಹಂಪಲು ವಿತರಿಸಿ, ಅವರೊಂದಿಗೆ ಪ್ರೀತಿ, ಕಾಳಜಿ ಹಾಗೂ ಮಾನವೀಯತೆಯನ್ನು ಹಂಚಿಕೊಂಡರು.
ಹಿರಿಯರನ್ನು ಗೌರವಿಸುವುದು, ನಿರ್ಗತಿಕರಿಗೆ ನೆರವಾಗುವುದು ಮತ್ತು ಆಶ್ರಮದ ನಿವಾಸಿಗಳಲ್ಲಿ ಸಂತಸ ಮೂಡಿಸುವ ಇಂತಹ ಸೇವಾ ಕಾರ್ಯಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತವೆ. ವಿಶೇಷ ದಿನವನ್ನು ಸಮಾಜಮುಖಿ ಕಾರ್ಯದ ಮೂಲಕ ಆಚರಿಸಿರುವುದು ಶ್ಲಾಘನೀಯ ಎಂದು ಸಂಸ್ಥೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ಸೇವಾ ಕಾರ್ಯದಲ್ಲಿ ಭಾಗಿಯಾದ ವರಲಕ್ಷ್ಮಿ ಹಾಗೂ ಅವರ ಕುಟುಂಬದ ಎಲ್ಲ ಸದಸ್ಯರಿಗೆ PGRSS ಸಂಸ್ಥೆಯ ವತಿಯಿಂದ ಅಧ್ಯಕ್ಷರಾದ ರಕ್ತದಾನಿ ಮಂಜು ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಇವರು ಚಿರಜೀವ ಸೇವಾ ಟ್ರಸ್ಟ್‌ನ ಅಧ್ಯಕ್ಷರು ಹಾಗೂ PGRSS ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದ ರಾಜ್ಯ ಸಹ ಕಾರ್ಯದರ್ಶಿಯಾಗಿದ್ದಾರೆ.





