Breaking
26 Nov 2026, Thu

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ವತಿಯಿಂದ ಡಿಸೆಂಬರ್ 6 ರಂದು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ, ಅಮ್ಟೂರು, ವೀರಕಂಭ, ಬೋಳಂತೂರು ಹಾಗೂ ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆಯು ಡಿಸೆಂಬರ್ 6ರಂದು ಭಾನುವಾರ ಕಲ್ಲಡ್ಕದ ಕಾವೇರಿ ಸಂಕೀರ್ಣದ ಆನಂದ ಮಂಟಪ ಸಭಾಭವನದಲ್ಲಿ ನಡೆಯಲಿದೆ.


ಕಾರ್ಯಕ್ರಮದ ಅಂಗವಾಗಿ ಗುರುಪೂಜೆ, ಭಜನಾ ಸಂಕೀರ್ತನೆ ಹಾಗೂ ಧಾರ್ಮಿಕ ಸಭೆ ಆಯೋಜಿಸಲಾಗಿದೆ.
ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯದ ಅಧ್ಯಕ್ಷ ಜಯಪ್ರಕಾಶ್ ಪೂಜಾರಿ ತೆಕ್ಕಿಪಾಪು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಡ, ನಂದಾದೀಪ ಫೌಂಡೇಶನ್ (ರಿ.) ಮಂಗಳೂರು ಇದರ ಸ್ಥಾಪಕಾಧ್ಯಕ್ಷ ಸದಾನಂದ ಪೂಜಾರಿ, ಅಮ್ಟೂರು ಮಂತ್ರದೇವತಾ ಸಾನಿಧ್ಯದ ಧರ್ಮದರ್ಶಿ ಮನೋಜ್ ಕುಮಾರ್ ಕಟ್ಟೆಮಾರ್, ಸದಾಶಿವ ಸನಿಲ್ ಬೊಂಡಾಲ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಟ್ರಸ್ಟ್ ನೀರಪಾದೆಯ ಶರತ್ ಪೂಜಾರಿ, ಸುರೇಂದ್ರ ಅಮೀನ್ ಬೋಳಂತೂರು, ಸಂದೀಪ್ ಪೂಜಾರಿ ಕೆಲಿಂಜ, ಶ್ರೀ ಜನಾರ್ದನ ಪೂಜಾರಿ ನಾರುಕೋಡಿ ಹಾಗೂ ಶಿವಾನಂದ ಏಳ್ತಿಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಬಿಲ್ಲವ ಮಹಿಳಾ ಘಟಕ ಕಲ್ಲಡ್ಕದ ಅಧ್ಯಕ್ಷೆ ಲಾವಣ್ಯ ಅಂಚನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಸಮಾಜ ಸೇವಕಿ ಗೀತಾಂಜಲಿ ಸುವರ್ಣ, ಚಲನಚಿತ್ರ ನಟಿ ಕುಮಾರಿ ಭವ್ಯಶ್ರೀ ಪೂಜಾರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *