ಸಿದ್ದಕಟ್ಟೆ: ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿದ್ದಕಟ್ಟೆ ಚರ್ಚ್ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪುಟಾಣಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ವತಿಯಿಂದ ಮಕ್ಕಳಿಗೆ ವಿವಿಧ ಆಟೋಟ ಸಾಮಗ್ರಿಗಳು ಹಾಗೂ ಪ್ರೊಟೀನ್ ಕಿಟ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಕೆ. ನಾರಾಯಣ ನಾಯಕ್, ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿಯ ನಿಕಟಪೂರ್ವ ಅಧ್ಯಕ್ಷ ರೋ. ದುರ್ಗಾದಾಸ್ ಶೆಟ್ಟಿ ಕರಿಂಕಿಜೆ, ರೋ. ಪ್ರಮೀಳಾ ದುರ್ಗಾದಾಸ್, ಸಿದ್ದಕಟ್ಟೆ ಸಿಎ ಬ್ಯಾಂಕ್ ನಿರ್ದೇಶಕ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಅಂಗನವಾಡಿ ಸಹಾಯಕಿ ಪೂಜಾ, ಮಕ್ಕಳ ತಾಯಂದಿರು, ಸ್ತ್ರೀಶಕ್ತಿ ಸದಸ್ಯರು, ಬಾಲವಿಕಾಸ ಸಮಿತಿ ಸದಸ್ಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಸರಿತಾ ಶೆಟ್ಟಿ ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು.




