Breaking
28 Nov 2026, Sat

ಡಿಸೆಂಬರ್ 5ರಂದು ಹೊಕ್ಕಾಡಿಗೋಳಿಯಲ್ಲಿ ಇತಿಹಾಸ ಪ್ರಸಿದ್ಧ ‘ವೀರ–ವಿಕ್ರಮ’ ಜೋಡುಕರೆ ಕಂಬಳ

ಬಂಟ್ವಾಳ: ತುಳುನಾಡಿನ ಗ್ರಾಮೀಣ ಸಂಸ್ಕೃತಿ, ಪರಂಪರೆ ಹಾಗೂ ಕಂಬಳ ಕ್ರೀಡೆಯ ವೈಭವವನ್ನು ಸಾರುವ ಮಹಿಷಮರ್ದಿನಿ ಕಂಬಳ ಸಮಿತಿ ಇದರ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ‘ವೀರ–ವಿಕ್ರಮ’ ಜೋಡುಕರೆ ಬಯಲು ಕಂಬಳವು ಡಿಸೆಂಬರ್ 5ರಂದು ಶನಿವಾರ ಹೊಕ್ಕಾಡಿಗೋಳಿಯಲ್ಲಿ ನಡೆಯಲಿದೆ.

ರಶ್ಮಿತ್ ಶೆಟ್ಟಿ ನೋಣಾಲ್‌ಗುತ್ತು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಂಬಳದ ಉದ್ಘಾಟನಾ ಕಾರ್ಯಕ್ರಮವು ಪೂರ್ವಾಹ್ನ 8 ಗಂಟೆಗೆ ಜರುಗಲಿದೆ.

ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣರಾದ ಶ್ರೀ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳವನ್ನು ಉದ್ಘಾಟಿಸಲಿದ್ದು, ಶ್ರೀ ಕ್ಷೇತ್ರ ಪೂಂಜದ ಪ್ರಧಾನ ಅರ್ಚಕರಾದ ಶ್ರೀ ಪ್ರಕಾಶ್ ಆಚಾರ್ಯ ಅವರು ಆಶೀರ್ವಚನ ನೀಡಲಿದ್ದಾರೆ. ಮೂಡುಬಿದಿರೆ ಚೌಟರ ಅರಮನೆಯ ಶ್ರೀ ಕುಲದೀಪ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪಡ್ಕಾರಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಧರ್ಮದರ್ಶಿ ಶ್ರೀ ಎ. ಜೀವಂಧರ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೊಗರೋಡಿ ಉದ್ಯಮಿ ಶ್ರೀ ರಕ್ಷಣ್ ಮೇಲಾಂಟ, ಬಿಜೆಪಿ ಮಂಗಳೂರು ವಿಭಾಗದ ವಿಭಾಗ ಪ್ರಭಾರಿ ಶ್ರೀ ಭಾರತೇಶ್ ಕೊಡಗು, ಮೈಸೂರು ಇಲೆಕ್ಟ್ರಿಕಲ್ ಲಿಮಿಟೆಡ್‌ನ ಮಾಜಿ ಅಧ್ಯಕ್ಷ ಶ್ರೀ ಸಂತೋಷ್ ಕುಮಾರ್ ರೈ ಬೊಳಿಯಾರ್, ಮೂಡುಬಿದಿರೆ ರುದ್ರಾಂಶ ಕನ್‌ಸ್ಟ್ರಕ್ಷನ್ಸ್‌ನ ಶ್ರೀ ಅಜಯ್ ದೀಕ್ಷಿತ್ ಶೆಟ್ಟಿ, ಕುಕ್ಕಿಪಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಶ್ರೀ ಶೇಖರ ಶೆಟ್ಟಿ ಬದ್ಯಾರು, ಸಿದ್ಧಕಟ್ಟೆ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಶ್ರೀ ರತ್ನಕುಮಾರ್ ಚೌಟ, ಸಿದ್ಧಕಟ್ಟೆ ಪದ್ಮ ಕ್ಲಿನಿಕ್‌ನ ಡಾ. ಪ್ರಭಾಚಂದ್ರ ಜೈನ್, ಅನಂತಪದ್ಮನಾಭ ಆಸ್ಪತ್ರೆಯ ಡಾ. ಸುದೀಪ್, ಆರಂಬೋಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಶ್ರೀ ಪ್ರವೀಣ್ ಚಂದ್ರ ಜೈನ್ ಜಂತೋಡಿ, ಸಿದ್ಧಕಟ್ಟೆ ಸಿ.ಎ. ಬ್ಯಾಂಕ್ ಅಧ್ಯಕ್ಷ ಶ್ರೀ ಪ್ರಭಾಕರ ಪ್ರಭು, ಸಂಗಬೆಟ್ಟು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಶ್ರೀ ಸತೀಶ್ ಪೂಜಾರಿ ಹಾಗೂ ಧರ್ಮಸ್ಥಳ ಸಿ.ಎ. ಬ್ಯಾಂಕ್‌ನ ಮಾಜಿ ಅಧ್ಯಕ್ಷ ಶ್ರೀ ಹರಿದಾಸ್ ಗಾಂಭೀರ್ ನಾರ್ಯಗುತ್ತು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಸಂಜೆ 7 ಗಂಟೆಯಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಬೆಂಗಳೂರು ಎಂ.ಆರ್.ಜಿ. ಗ್ರೂಪ್‌ನ ಸ್ಥಾಪಕ ಅಧ್ಯಕ್ಷ ಡಾ. ಪ್ರಕಾಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಗೌರವ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಅದಾನಿ ಗ್ರೂಪ್ ದಕ್ಷಿಣ ಭಾರತದ ಉಪಾಧ್ಯಕ್ಷ ಕಿಶೋರ್ ಆಳ್ವ, ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಮಾಜಿ ಅಧ್ಯಕ್ಷ ಸಂದೀಪ್ ರೆಡ್ಡಿ, ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಾಯಕ ಜಿ.ಎನ್. ವೇಣುಗೋಪಾಲ ಹಾಗೂ ಬೆಂಗಳೂರಿನ ಉದ್ಯಮಿ ಸಿ. ಮುನಿರಾಜು ಉಪಸ್ಥಿತರಿರಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಮೂಲ್ಕಿ–ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ ಮತ್ತು ಕಿಶೋರ್ ಕುಮಾರ್, ಕರ್ನಾಟಕ ಸರಕಾರದ ಮಾಜಿ ಸಚಿವರಾದ ರಮಾನಾಥ ರೈ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಉಡುಪಿಯ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಳ್ಳುಂಜೆ ಕಂಬಳ ಸಮಿತಿಯ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಬಳ್ಳುಂಜೆಗುತ್ತು, ಮಂಗಳೂರು ಲೋಟಸ್ ಪ್ರಾಪರ್ಟಿಸ್‌ನ ವ್ಯವಸ್ಥಾಪಕ ಪಾಲುದಾರ ಸಂಪತ್ ಶೆಟ್ಟಿ, ಪುಣೆಯ ಉದ್ಯಮಿ ಅಭಿಷೇಕ್ ಭಂಡಾರಿ, ಮುನಿಯಾಲ್ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಉದಯ ಶೆಟ್ಟಿ ಹಾಗೂ ಮುಂಬೈ ಗೋಲ್ಡನ್ ಫೋರ್ಕ್ ಹಾಸ್ಪಿಟಾಲಿಟಿಯ ಎಂ.ಡಿ. ಹಾಲಾಡಿ ಆದರ್ಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಕಂಬಳದ ಮೂಲಕ ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ, ಗ್ರಾಮೀಣ ಜೀವನದ ಸೊಗಡು ಹಾಗೂ ಜನಪದ ಸಂಸ್ಕೃತಿಯ ವೈಭವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಕಂಬಳಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *