ಹೊಕ್ಕಾಡಿಗೋಳಿ: ದಿನಾಂಕ 28.2.2025 ಶುಕ್ರವಾರದಂದು ಸ ಉ ಪ್ರಾ ಶಾಲೆ, ಹೊಕ್ಕಾಡಿಗೋಳಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು.
ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಶಾಲಾ ವಿಜ್ಞಾನ ಶಿಕ್ಷಕಿಯು ಮಾತನಾಡಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಉದ್ದೇಶ ಹಾಗೂ ನಮ್ಮ ಜೀವನದಲ್ಲಿ ವಿಜ್ಞಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ವಿದ್ಯಾರ್ಥಿಗಳೇ ತಯಾರಿಸಿದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಲಾಯಿತು. ಹಾಗೂ ಪ್ರಯೋಗಗಳನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಸದಸ್ಯರು, ಪೋಷಕರು, ಮುಖ್ಯಶಿಕ್ಷಕರು , ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದು ಸಹಕರಿಸಿದರು.




