ವಿಟ್ಲ: ಕೋಟಿ ಚೆನ್ನಯ ಬಿಲ್ಲವ ಸಂಘ (ರಿ) ಪುಣಚ, ಬಿಲ್ಲವ ಮಹಿಳಾ ಘಟಕದ ವತಿಯಿಂದ ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅನ್ನಪೂರ್ಣ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಶಿಬಿರ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಈಶ್ವರ ಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ವಿನುತಾ, ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕಿ ಗೀತಾ ಆರ್., ಪುಣಚ ಪರಿಯಾಲ್ತಡ್ಕ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಸೌಮ್ಯಾ ತರಬೇತಿ ನೀಡಿದರು.
ಪುಣಚ ಗ್ರಾಮ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಶಿಬಿರಾರ್ಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪುಣಚ ಕೋಟಿ ಚೆನ್ನಯ ಬಿಲ್ಲವ ಸಂಘದ ಅಧ್ಯಕ್ಷ ರಮೇಶ್ ಕೋಡಂದೂರು, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಸಂಕೇಶ, ಕೋಶಾಧಿಕಾರಿ ಲೋಹಿತ್ ಅಜ್ಜಿನಡ್ಕ, ಸಂಘಟನಾ ಕಾರ್ಯದರ್ಶಿ ಜಯಂತ ಮೂಡಾಯಿಬೆಟ್ಟು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.







