Breaking
22 Mar 2026, Sun

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ದೈಹಿಕ ಶಿಕ್ಷಕಿ ರೋಹಿಣಿ ಬರಿಮಾರ್ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ,ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ 2024- 25 ಕಾರ್ಯಕ್ರಮ ವು ದಿನಾಂಕ 13/3/2025ರ ಗುರುವಾರ ಜರುಗಿತು.

ಈ ಕ್ರೀಡಾಕೂಟದಲ್ಲಿ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಮತ್ತು ಲಾಂಗ್ ಜಂಪ್ ನಲ್ಲಿ ತೃತೀಯ ಸ್ಥಾನ ಪಡೆದ ಕೆಪಿಎಸ್ ಹೈ ಸ್ಕೂಲ್ ಮೊಂಟೆಪದವು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಬರಿಮಾರ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಸಂಧರ್ಭದಲ್ಲಿ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿಕೆ ನಾಯಕ್ ಇವರು ಶಿಕ್ಷಕಿ ರೋಹಿಣಿ ಬರಿಮಾರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Leave a Reply

Your email address will not be published. Required fields are marked *