Breaking
6 May 2026, Wed

ಮಟ್ಕಾ ಅಡ್ಡೆಗೆ ಪೊಲೀಸ್ ದಾಳಿ : ಇಬ್ಬರ ಬಂಧನ

ಬಂಟ್ವಾಳ; ಮಾ. 19: ಬಿಸಿರೋಡು ಸಮೀಪದ ಕೈಕಂಬ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ ಆಡುತ್ತಿದ್ದ ವೇಳೆ ಬಂಟ್ವಾಳ ನಗರ ಠಾಣಾ ಎಸ್‌.ಐ‌ ರಾಮಕೃಷ್ಣ ನೇತ್ರತ್ವದಲ್ಲಿ ದಾಳಿ ನಡೆಸಿದ ಪೋಲಿಸರು ಇಬ್ಬರನ್ನು ಬಂಧಿಸಿ ಆಟಕ್ಕೆ ಬಳಸುವ ಸೊತ್ತುಗಳ ಸಹಿತ ನಗದು ಹಣವನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.
ಬಂಟ್ವಾಳ ಬಿ.ಮೂಡ ಗ್ರಾಮದ ಕೈಕಂಬ ಎಂಬಲ್ಲಿ ಖಾಸಗಿ ಕಟ್ಟಡವೊಂದರ ಬಳಿಯಲ್ಲಿ ಆಟಕ್ಕೆ ತಯಾರು ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಪೋಲೀಸರು ಪ್ರಮುಖ ಆರೋಪಿಗಳಾದ ನಾವೂರ ನಿವಾಸಿ ಸುರೇಶ್ ಹಾಗೂ ಮಿತ್ತಬೈಲು ನಿವಾಸಿ ಭಾಸ್ಕರ ಎಂಬವರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು 3.500 ರೂ ನಗದು ಹಾಗೂ ಆಟಕ್ಕೆ ಬಳಸಿದ ಮಟ್ಕಾ ಎಲೆ, ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ‌ನಗರ ಪೋಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *