ವಿಟ್ಲ: ವಿಟ್ಲ ಸರಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಏಕಾಏಕಿ ನಿಂತ ಕೇರಳ ಸರಕಾರಿ ಬಸ್ಸಿಗೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ.
ವಿಟ್ಲ ಪೇಟೆಯ ಕಡೆಯಿಂದ ಕಾಸರಗೋಡು ಕಡೆಗೆ ಹೊರಟಿದ್ದ ಬಸ್ ಗೆ ಕಾರು ಡಿಕ್ಕಿಯಾಗಿದ್ದು, ಕಾರಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಅಪಘಾತದ ಬಳಿಕ ಬಸ್ಸು ರಸ್ತೆಯಲ್ಲೇ ಬಾಕಿಯಾಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಕೇರಳ ಸಾರಿಗೆ ಇಲಾಖೆಯ ಗಮನಕ್ಕೆ ತಂದರೂ, ಚಾಲಕರು ಬಸ್ಸನ್ನು ನಿಲ್ದಾಣದ ಒಳಗೆ ತೆಗೆದುಕೊಂಡು ಹೋಗುವ ಕಾರ್ಯ ಮಾಡುತ್ತಿಲ್ಲ. ಸರಕಾರಿ ಬಸ್ ನಿಲ್ದಾಣದ ಒಳಗೆ ಬಸ್ ಹೋಗದೇ ರಸ್ತೆಯಲ್ಲೇ ನಿಲ್ಲುತ್ತಿರುವುದು ಘಟನೆಗೆ ಕಾರಣ ಎನ್ನಲಾಗಿದೆ.




