Breaking
22 Mar 2026, Sun

ಅಮ್ಮುಂಜೆ ಗ್ರಾಮ ಪಂಚಾಯತ್ ಗೆ ಕ್ಷಯಮುಕ್ತ ಗ್ರಾ ಪಂ ಪ್ರಶಸ್ತಿ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ, ನರ್ಸಿಂಗ್ ಫೌಂಡೇಶನ್, ಯೆನೆಪೋಯ ನರ್ಸಿಂಗ್ ಕಾಲೇಜು, ದೇರಳಕಟ್ಟೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕ್ಷಯರೋಗ ದಿನ-2025 ಮಾ.24 ಸೋಮವಾರ ಬೆಳಿಗ್ಗೆ ಗಂಟೆ 10.00ಕ್ಕೆ ಯೆಂಡುರೆನ್ಸ್ ಝನ್, ಯೆನೆಪೋಯ ವಿಶ್ವವಿದ್ಯಾಲಯ ದೇರಳಕಟ್ಟೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ಷಯಮುಕ್ತ ಗ್ರಾಮ ಪಂಚಾಯತ್ 2024 ಗೆ ಆಯ್ಕೆಯಾದ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯತ್ ಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಅಮ್ಮುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ , ಉಪಾಧ್ಯಕ್ಷ ರಾಧಾಕೃಷ್ಣ ತಂತ್ರಿ, ಪಿ ಡಿ ಒ ನಯನಾ ಹಾಗೂ ಬೆಂಜನಪದವು ಅರೋಗ್ಯ ಕೇಂದ್ರದ ವೈದ್ಯಧಿಕಾರಿ ಪ್ರಶಸ್ತಿ ವಿತರಣಾ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *