Breaking
19 Sep 2026, Sat

39 ವರ್ಷಗಳ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸೇವೆಯಿಂದ ಶ್ರೀಮತಿ ಮಮತ ಕೆ. ನಿವೃತ್ತಿ: ಆರೋಗ್ಯ ಇಲಾಖೆಯಿಂದ ಬೀಳ್ಕೊಡುಗೆ

ಬಂಟ್ವಾಳ: ತಾಲೂಕು ಆರೋಗ್ಯಾಧಿಕಾರಿ ಕಛೇರಿಯಲ್ಲಿ  ಸುಮಾರು 39 ವರ್ಷಗಳ ಕಾಲ  ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ  ಸೇವೆ ಸಲ್ಲಿಸಿದ ಶ್ರೀಮತಿ ಮಮತ ಕೆ. ಅವರು  ಮಾರ್ಚ್ 31ರಂದು ವಯೋ ನಿವೃತ್ತಿ ಹೊಂದಿದ್ದು, ಆರೋಗ್ಯ ಇಲಾಖೆಯಿಂದ  ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.

ಸನ್ಮಾನ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ ಅವರು ಶ್ರೀಮತಿ ಮಮತ ಅವರ ಸೇವೆಯನ್ನು ಸ್ಮರಿಸಿ, ಅನೇಕ ವರ್ಷಗಳ ಕಾಲ ಆರೋಗ್ಯ ಕ್ಷೇತ್ರದಲ್ಲಿ ನೀಡಿದ ಅಮೂಲ್ಯ ಕೊಡುಗೆಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಆರೋಗ್ಯ ಇಲಾಖಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಮಮತ ಅವರಿಗೆ ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಆರ್. ತಿಮ್ಮಯ್ಯ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ರಾಜೇಶ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ , ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕುಸುಮ ಹಾಗೂ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *