Breaking
19 Sep 2026, Sat

ಉಪ್ಪಿನಂಗಡಿ: ಖಾಸಗಿ ಬಸ್ ಪಲ್ಟಿ ಓರ್ವ ಪ್ರಯಾಣಿಕ ಸಾವು 12 ಮಂದಿಗೆ ಗಾಯ

ಉಪ್ಪಿನಂಗಡಿ: ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4 ರಂದು ಬೆಳಿಗ್ಗೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ಪಲ್ಟಿಯಾದ ಪರಿಣಾಮ ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮುಲ್ಕಿಗೆ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಯಡಿಯೂರು ನಿವಾಸಿ ಹರ್ಷ (24)
ಮೃತಪಟ್ಟಿದ್ದಾರೆ.

ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *