Breaking
14 May 2026, Thu

ಮಂಗಳೂರು: ಬಸ್ ನಿಲ್ದಾಣದ ಪಾರ್ಕಿಂಗ್ ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಯುವಕ ಪೊಲೀಶ್‌ ವಶಕ್ಕೆ

ಮಂಗಳೂರು: ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಯುವಕನನ್ನು ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಗಸ್ತು ನಿರತನಾಗಿದ್ದ ವೇಳೆ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಕತ್ತಲೆಯಲ್ಲಿ ನಿಂತಿದ್ದ ಮೂಲತಃ ಕೋಲಾರ ಜಿಲ್ಲೆಯ ಕೆಜಿಎಫ್ ಬಂಗಾರ ಪೇಟೆ ಕೆಎಸ್‌ಆರ್‌ಟಿಸಿ ಡಿಪೋ ಹತ್ತಿರದ ನಿವಾಸಿ ಹರ್ಷಿತ್ (26),
ಪೊಲೀಸರನ್ನು ಕಂಡೊಡನೆ ಓಡಿ ಹೋಗಲು ಯತ್ನಿಸಿದ್ದಾನೆ. ತಕ್ಷಣ ಆತನನ್ನು ಹಿಡಿದು ವಿಚಾರಿಸಿದಾಗ ಸಮರ್ಪಕ ಉತ್ತರ ನೀಡದೆ ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿದ್ದಾನೆ. ಹೀಗಾಗಿ ಆತನನ್ನು ವಶಕ್ಜೆ ಪಡೆದಿದ್ದು,ಆತನ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *