ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಶೇ 93.90 ಫಲಿತಾಂಶಗಳಿಸಿ ಮೊದಲ ಸ್ಥಾನ ಪಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ 93.57 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿದೆ.
ಈ ಬಾರಿಯೂ ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್ನ ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್ ಆಗಿದ್ದಾರೆ.
ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಯಾದಗಿರಿ ಜಿಲ್ಲೆ ಶೇ.48.45 ಫಲಿತಾಂಶದ ಮೂಲಕ ಕೊನೆಯ ಸ್ಥಾನ ಪಡೆದಿದೆ.



