Breaking
14 May 2026, Thu

ದ್ವಿತೀಯ ಪಿಯುಸಿ ಪ್ರಥಮ ರ‍್ಯಾಂಕ್ ವಿಜೇತರಿಗೆ ದ.ಕ. ಜಿಲ್ಲಾಧಿಕಾರಿಯಿಂದ ಅಭಿನಂದನೆ

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏ.08ರಂದು ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಈ ಇಬ್ಬರೂ ವಿದ್ಯಾರ್ಥಿನಿಯರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಭಿನಂದಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಕೆನರಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಹಾಗೂ ವಿಜ್ಞಾನ ವಿಭಾಗದಲ್ಲಿ ಮೊದಲ ರ‍್ಯಾಂಕ್ ಪಡೆದ ಎಕ್ಸ್‌ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ಅವರನ್ನು ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಕರೆಸಿ ಅಭಿಂದಿಸಿದರು. ಜೊತೆಗೆ ವಿದ್ಯಾರ್ಥಿಗಳ ಸಾಧನೆಗೆ ಬೆನ್ನೆಲುಬಾಗಿ ನಿಂತ ಪೋಷಕರನ್ನು, ಶಿಕ್ಷಕರನ್ನು ಅಭಿನಂದಿಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಕಲಿಕಾ ವಿಧಾನ, ಅಧ್ಯಯನ, ಶ್ರದ್ಧೆ ಕುರಿತು ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಆನಂದ್ , ಅಮೂಲ್ಯ ಕಾಮತ್ ಹೆತ್ತವರಾದ ಡಾ. ದಿನೇಶ್ ಕಾಮತ್ ಮತ್ತು ಡಾ. ಅನುರಾಧ ಕಾಮತ್, ದೀಪಶ್ರೀ ಹೆತ್ತವರಾದ ಅಶೋಕ್ ಎಸ್. ಮತ್ತು ಸುಮಾ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಎಚ್.ಜಿ., ಇಲಾಖೆಯ ಶಾಖಾಧಿಕಾರಿ ನಿತಿನ್ ಶೆಟ್ಟಿ, ಕೆನರಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಲತಾ ಮಹೇಶ್ವರಿ, ಎಕ್ಸ್‌ಪರ್ಟ್ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *