Breaking
23 Mar 2026, Mon

ಸುಬ್ರಹ್ಮಣ್ಯಕ್ಕೆ ವಿಸ್ತರಣೆಗೊಂಡ ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಏಪ್ರಿಲ್ 12ರಂದು ಸೇವಾರ್ಪಣೆ

ಮಂಗಳೂರು – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಣೆಗೊಂಡಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವನ್ನು ಏಪ್ರಿಲ್ 12ರಂದು ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಸಂಸತ ಹಂಚಿಕೊಂಡಿರುವ ದಕ್ಷಿಣ ಕನ್ನಡದ ಸಂಸದ ಬ್ರಿಜೇಶ್ ಚೌಟ ಅವರು, “ ರೈಲ್ವೆ ಸಚಿವಾಲಯದೊಂದಿಗೆ ಫಾಲೋ ಅಪ್ ಮಾಡಿದ ಕಾರಣಕ್ಕೆ ಬಹುಕಾಲದಿಂದ ಬಾಕಿ ಉಳಿದಿದ್ದ ಬೇಡಿಕೆ ಈಡೇರುತ್ತಿರುವುದನ್ನು ನೋಡಿ ಸಂತೋಷವಾಗುತ್ತಿದೆ. ಮಾನ್ಯ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಇದೇ ಶನಿವಾರ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಜೆ 4 ಗಂಟೆಗೆ ರೈಲಿನ ಪ್ರಥಮ ಚಾಲನೆಯನ್ನು ಉದ್ಘಾಟಿಸಲಿದ್ದಾರೆ. ಈ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಬೇಕಾಗಿ ನಮ್ಮ ಎಲ್ಲಾ ರೈಲ್ವೆ ಯಾತ್ರಿ ಸಂಘದ ಸದಸ್ಯರು, ರೈಲ್ವೆ ಹೋರಾಟಗಾರರು, ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

Leave a Reply

Your email address will not be published. Required fields are marked *