Breaking
22 Sep 2026, Tue

ಸಹೋದರಿಯರಿಬ್ಬರು ನಾಪತ್ತೆ: ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

ಹಿರಿಯಡ್ಕ: ಸಹೋದರಿಯರಿಬ್ಬರು ನಾಪತ್ತೆಯಾಗಿರುವ ಕುರಿತು ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಏ.09ರಂದು ದೂರು ದಾಖಲಾಗಿದೆ.

ಮಂಜುಳಾ (24) ಮತ್ತು ಮಲ್ಲಿಕಾ (18) ಎ. 3ರಂದು ಮನೆಯಿಂದ ಹೊರಗೆ ಹೋದವರು ವಾಪಸ್‌ ಬಾರದೆ ನಾಪತ್ತೆಯಾಗಿದ್ದಾರೆ.

ಮಂಜುಳಾ (24) ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ವಿವಾಹಿತೆಯಾಗಿರುವ ಇವರು ಕಳೆದ ಎರಡು ವರ್ಷಗಳಿಂದ ತವರು ಮನೆಯಲ್ಲಿ ವಾಸವಾಗಿದ್ದರು.
ಮಲ್ಲಿಕಾ (18) ಎಣ್ಣೆಗಪ್ಪು ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Leave a Reply

Your email address will not be published. Required fields are marked *