Breaking
22 Mar 2026, Sun

ಇಂದಿನಿಂದ ಮಂಗಳೂರು – ಸುಬ್ರಹ್ಮಣ್ಯ ನಡುವೆ ರೈಲು ಸಂಚಾರ ಆರಂಭ: ರೈಲ್ವೇ ವೇಳಾ ಪಟ್ಟಿ ಹೀಗಿರಲಿದೆ

ಮಂಗಳೂರು : ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚಾರ ಆರಂಭವಾಗುತ್ತಿದ್ದು, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಸಂಜೆ 4 ಗಂಟೆಗೆ ಬಾವುಟ ಪ್ರರ್ಶನದ ಮೂಲಕ ಉದ್ಘಾಟನೆಗೊಳಿಸಲಿದ್ದಾರೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸಂತಸ ವ್ಯಕ್ತಪಡಿಸಿದ್ದು, “ಬಿ.ಸಿ.ರೋಡು ಪುತ್ತೂರು ರೈಲು ಪ್ರಯಾಣಿಕರಿಗೂ ಇದು ಅನುಕೂಲವಾಗಲಿದೆ” ಎಂದಿದ್ದಾರೆ.
ಈ ರೈಲು ಸಂಜೆ 5 ಗಂಟೆಗೆ ನೆಟ್ಟಣ ರೈಲು ನಿಲ್ದಾಣಕ್ಕೆ ತಲುಪಲಿದೆ ಎಂದು ರೈಲು ಬಳಕೆದಾರರ ವೇದಿಕೆ ನೆಟ್ಟಣದ ಅಧ್ಯಕ್ಷ ಪ್ರಸಾದ್ ಕೆ ಜೆ ಪ್ರಕಟಿಸಿದ್ದಾರೆ.


ಹೀಗಿರಲಿದೆ ರೈಲ್ವೇ ವೇಳಾ ಪಟ್ಟಿ

ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಇಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ-ಮಂಗಳೂರು (56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪಲಿದೆ.
ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.

Leave a Reply

Your email address will not be published. Required fields are marked *