Breaking
6 May 2026, Wed

ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ, ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (77) ಅವರು ಇಂದು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ಧನ್ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ವಯೋಸಹಜ ಕಾಯಿಲೆ ಹಿನ್ನೆಲೆ ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು.

1991ರಲ್ಲಿ ಕಾಶಿನಾಥ್‌ ಅವರ ಅಜಗಜಾಂತರ ಚಿತ್ರದ ಮೂಲಕ ಬ್ಯಾಂಕ್‌ ಜನಾರ್ಧನ್‌, ಕನ್ನಡ ಚಿತ್ರರಂಗಕ್ಕೆ ಪೋಷಕ ಕಲಾವಿದರಾಗಿ ಕಾಲಿಟ್ಟಿದ್ದರು.
500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಇವರು ಪೋಷಕ ನಟನಾಗಿ ಚಂದನವನದಲ್ಲಿ ಗುರುತಿಸಿಕೊಂಡಿದ್ದರು ಮತ್ತು ಹಿರಿತೆರೆ, ಕಿರುತೆರೆಯಲ್ಲಿಯೂ ಕೆಲಸ ಮಾಡಿದ್ದಾರೆ.

Leave a Reply

Your email address will not be published. Required fields are marked *