Breaking
26 Mar 2026, Thu

ಎ.18 ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಉದ್ಘಾಟನೆ ಮತ್ತು “ಹೊರನಾಡಿನಲ್ಲಿ ತುಳುವರು” ಪುಸ್ತಕ ಬಿಡುಗಡೆ ಕಾರ್ಯಕ್ರಮ

ಮಂಗಳೂರು: ಕೇರಳ ರಾಜ್ಯ – ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ಮತ್ತು ವಿಶ್ವನಾಥ ದೊಡ್ಮನೆಯವರ “ಹೊರನಾಡಿನಲ್ಲಿ ತುಳುವರು” ಪುಸ್ತಕ ಬಿಡುಗಡೆ ಸಮಾರಂಭವು ಎ.18ರಂದು ಕಿನ್ನಿಗೋಳಿಯ ಯುಗಪುರುಷ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಡಾ.ವಾಮನ ರಾವ್ ಬೇಕಲ್ ತಿಳಿಸಿದ್ದಾರೆ.

ಅಪರಾಹ್ನ 2ಗಂಟೆಯಿಂದ ಕಾಯಕ್ರಮ ಆಗಲಿದ್ದು, ದ.ಕ. ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಘಟಕವನ್ನು ಉದ್ಘಾಟಿಸಲಿದ್ದಾರೆ. ಮುಂಬೈಯ ವಿಶ್ವನಾಥ ದೊಡ್ಮನೆಯವರ “ಹೊರನಾಡಿನಲ್ಲಿ ತುಳುವರು” ಕೃತಿಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಾನಂದ ಪೆರಾಜೆ ‌ ಬಿಡುಗಡೆ ಮಾಡಲಿದ್ದಾರೆ.
ಸಭಾ ಕಾಯಕ್ರಮಕ್ಕೆ ಕೊಳಚಪ್ಪು ಸತ್ಯವತಿ ಭಟ್ ದೀಪ ಪ್ರಜ್ವಲಿಸಲಿದ್ದು, ಡಾ. ಶಾಂತಾ ಪುತ್ತೂರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ, ಘಟಕದ ಅಧ್ಯಕ್ಷ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಅಧ್ಯಕ್ಷತೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಕಾಸರಗೋಡಿನ ಕನ್ನಡ ಭವನ ಕೇಂದ್ರ ಸಮಿತಿಯ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ-2025ನ್ನು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಪ್ರದೀಪ ಕುಮಾರ ಕಲ್ಕೂರ, ಕ್ಯಾಪ್ಟನ್ ಗಣೇಶ ಕಾರ್ಣಿಕ್, ಶ್ರೀಪತಿ ಭಟ್ ಮೂಡುಬಿದಿರೆ, ಭುವನಾಭಿರಾಮ ಉಡುಪರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ದ. ಕ.ಜಿಲ್ಲಾ ಘಟಕ ಆಶ್ರಯದಲ್ಲಿ ನಡೆದ ಚುಟುಕು ರಚನಾ ಸ್ಪರ್ಧೆಯ ವಿಜೇತರಾದ ನಿರ್ಮಲಾ ಸುರತ್ಕಲ್, ಗೀತಾ ಎನ್. ನರಿಕೊಂಬು, ಡಾ.ಸುಮತಿ ಪಿ, ಅಬ್ದುಲ್ ಸಮದ್ ಬಾವಾ ಹಾಗೂ ದಯಾವತಿ ಚರಂತಿಮಠ ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಕಾವ್ಯ ಪ್ರಶಸ್ತಿ-2025 ನೀಡಿ ಗೌರವಿಸಲಾಗುವುದು.

ಕೊಳಚಪ್ಪು ಸತ್ಯವತಿ ಭಟ್ಟರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಚುಟುಕು ಕವಿಗೋಷ್ಠಿಯಲ್ಲಿ 24 ಮಂದಿ ಕವಿಗಳು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *