Breaking
6 May 2026, Wed

ಉಜಿರೆ : ಬೈಕ್ ರಿಕ್ಷಾ ನಡುವೆ ಅಪಘಾತ: ಇಬ್ಬರು ಗಂಭೀರ,ಆಸ್ಪತ್ರೆಗೆ ದಾಖಲು

ಉಜಿರೆ: ಬೈಕ್ ಹಾಗೂ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಉಜಿರೆಯಲ್ಲಿ ನಡೆದಿದೆ.

ಗಾಯಾಳು ಬೈಕ್ ಸವಾರನನ್ನು ಉಜಿರೆಯ ನಿವಾಸಿ ತನುಷ್ ಶೆಟ್ಟಿ ಎಂದು ಗುರುತಿಸಲಾಗಿದೆ.

ರಿಕ್ಷಾ ಹಾಸನ ಮೂಲದವರದ್ದು ಎಂದು ತಿಳಿದು ಬಂದಿದೆ.

ಉಜಿರೆಯ ಚಾರ್ಮಾಡಿ ಕಡೆಗೆ ಪ್ರಯಾಣಿಸುತ್ತಿದ್ದ ರಿಕ್ಷಾ ಹಾಗು ಅನುಗ್ರಹದಿಂದ ಉಜಿರೆಗೆ ಪ್ರಯಾಣಿಸುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *