Breaking
19 Sep 2026, Sat

ಉಳ್ಳಾಲದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾದ ಪಶ್ಚಿಮ ಬಂಗಾಳ ಮೂಲದ ಯುವತಿ

ಉಳ್ಳಾಲ : ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಯುವತಿಯೊಬ್ಬಳು ತೀವ್ರವಾಗಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಕುತ್ತಾರು ಸಮೀಪದ ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ಬುಧವಾರ ರಾತ್ರಿಯ ವೇಳೆ ನಡೆದಿದೆ.

ಮಧ್ಯರಾತ್ರಿ ಸುಮಾರು 1.30 ಗಂಟೆ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಯುವತಿ ಸ್ಥಳೀಯರೋರ್ವರ ಮನೆಯ ಬಾಗಿಲನ್ನು ತಟ್ಟಿ ಕುಡಿಯಲು ನೀರು ಕೇಳಿದ್ದಾಳೆ.

ಮೈಮೇಲೆ ತರಚಿದ ಗಾಯಗಳಾಗಿದ್ದು ಗಾಬರಿಗೊಂಡ ಸ್ಥಳೀಯರು ಯುವತಿಯನ್ನು ಉಪಚರಿಸಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಆಕೆಯನ್ನು ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕರ ತಂಡವೊಂದು ಯುವತಿಯನ್ನ ರಾಣಿಪುರದ ನೇತ್ರಾವತಿ ನದಿ ತಟದ ಬಳಿ ಕರೆತಂದಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಿರುವ ಶಂಕೆ ಇದೆ.

ಹೊರ ರಾಜ್ಯದ ಕೂಲಿ ಕಾರ್ಮಿಕರು ಆಗಿಂದಾಗ್ಗೆ ಇಲ್ಲಿನ ನಿರ್ಜನ ಪ್ರದೇಶಕ್ಕೆ ಭೇಟಿ ಕೊಟ್ಟು ಗುಂಡು-ತುಂಡಿನ ಮೋಜು ಮಸ್ತಿ ಮಾಡುತ್ತಿರುತ್ತಾರೆ.

ಆಸ್ಪತ್ರೆಗೆ ಪೊಲೀಸರ ತಂಡ ಭೇಟಿ ನೀಡಿದ್ದು, ಘಟನಾ ಸ್ಥಳದ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *