Breaking
21 Mar 2026, Sat

ಉಳ್ಳಾಲದಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ ನಾಲ್ವರಲ್ಲಿ ಓರ್ವ ಅರೆಸ್ಟ್: ಇನ್ನುಳಿದ ಮೂವರ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಉಳ್ಳಾಲ: ಮಂಗಳೂರು ಹೊರವಲಯದ ಕುತ್ತಾರು ಸಮೀಪದ ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ಬುಧವಾರ ರಾತ್ರಿಯ ವೇಳೆ ಅಸ್ವಸ್ಥ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ.

ಯುವತಿಯ ಈ ಸ್ಥಿತಿಗೆ ಕುಂಪಲ ಬಗಂಬಿಲ ಮೂಲದ ರಿಕ್ಷಾ ಚಾಲಕ ಸೇರಿ ಮೂವರು ಕಾರಣರಾಗಿದ್ದು, ರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಪ.ಬಂಗಾಳ ಮೂಲದ ಯುವತಿ ಉದ್ಯೋಗವನ್ನು ಅರಸಿ ಬಂದಿದ್ದು ಕೇರಳದ ಉಪ್ಪಳ ಎಂಬಲ್ಲಿ ವಾಸವಾಗಿದ್ದಳು.ಸ್ನೇಹಿತನ ಜೊತೆಗೆ ಮಂಗಳೂರಿಗೆ ಬಂದಿದ್ದು ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿದೆ.ಈ ವೇಳೆ ಆಕೆ ಒಬ್ಬಳೇ ಮಧ್ಯರಾತ್ರಿ ಹೊರಗೆ ಬಂದಿದ್ದಾಳೆ.ಈ ವೇಳೆ ಸಿಕ್ಕ ರಿಕ್ಷಾ ಚಾಲಕನ ಬಳಿ ಸಹಾಯ ಕೇಳಿದ್ದಾಳೆ. ಸಹಾಯ ಮಾಡುವ ನೆಪದಲ್ಲಿ ತನ್ನ ವಾಹನದಲ್ಲಿ ಕುಳ್ಳಿರಿಸಿದ ಚಾಲಕ ಆಕೆಗೆ ಅಮಲು ಪದಾರ್ಥ ನೀಡಿ ಸ್ನೇಹಿತರ ಜೊತೆಗೆ ಸೇರಿ ಕೃತ್ಯವೆಸಗಿದ್ದಾನೆ ಅನ್ನುವ ಮಾಹಿತಿಗಳು ಲಭ್ಯವಾಗಿದೆ.

ಯುವತಿ ಏ.16 ತಡರಾತ್ರಿ ಮೈಪೂರ್ತಿ ಗಾಯವಾಗಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಸ್ಥಳೀಯರೊಬ್ಬರ ಮನೆ ಬಾಗಿಲು ಬಡಿದಿದ್ದಾಳೆ.ನೀರು ಕೇಳುತ್ತಿದ್ದಂತೆ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಮನೆಮಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಯುವತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವೇಳೆ ನಶೆಯಲ್ಲಿದ್ದ ಯುವತಿ ಮಾತನಾಡದ ಸ್ಥಿತಿಯಲ್ಲಿದ್ದು, ಮೈಯಿಡೀ ಗಾಯದ ಗುರುತುಗಳಾಗಿತ್ತು.ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನ ಬಂಧನವಾಗಿದ್ದು ಇನ್ನುಳಿದ ಮೂವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *