ಮೂಲ್ಕಿ: ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ.
ಇಂದು ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಬಾಗ ಕುಸಿದು ಬಿದ್ದಿದೆ.

ಈ ಸಂದರ್ಭ ಅರ್ಚಕರು ತೇರಿನಲ್ಲೇ ಇದ್ದರು. ಈ ಘಟನೆಯಿಂದ ಭಕ್ತರು ಆತಂಕಕ್ಕೆ ಒಳಗಾದರು
ಬಳಿಕ ದೇವರ ಉತ್ಸವ ಚಂದ್ರ ಮಂಡಲ ರಥದಲ್ಲಿ ಮುಂದುವರಿಯಿತು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.



