Breaking
13 May 2026, Wed

ಕಾರು ಹಾಗೂ ಆಟೋ ರಿಕ್ಷಾವೊಂದರ ನಡುವೆ ಅಪಘಾತ:ರಿಕ್ಷಾ ಚಾಲಕ ಸ್ಥಳದಲ್ಲೇ ಸಾವು

ನೆಲ್ಯಾಡಿ: ಕಾರು ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯ ವಾಲ್ತಾಜೆ ಸೇತುವೆ ಬಳಿ ನಡೆದಿದೆ.

ಮೃತಪಟ್ಟವರನ್ನು ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪದ ಪೇರಮಜಲು ನಿವಾಸಿ ಪ್ರಭಾಕರ (40ವ.) ಎಂದು ಗುರುತಿಸಲಾಗಿದೆ.

ಪ್ರಭಾಕರ ಅವರು ನೆಲ್ಯಾಡಿಯಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದವರು ಪೆರಿಯಶಾಂತಿ ತಲುಪುತ್ತಿದ್ದಂತೆ ಬೆಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

ಈ ವೇಳೆ ಆಟೋ ಚಾಲಕ ಪ್ರಭಾಕರ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನೆಲ್ಯಾಡಿ ಹೊರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *