Breaking
20 Jun 2026, Sat

ಮೂಡಬಿದ್ರೆ: ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ: ಸಹಸವಾರೆ ಸಾವು

ಮೂಡಬಿದ್ರೆ: ಬೈಕ್‌ವೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ. ನಿಕ್ಷಿತಾ(20) ಸಾವನ್ನಪ್ಪಿದ ಯುವತಿಯಾಗಿದ್ದಾಳೆ.

ಈಕೆ ಬೆಳುವಾಯಿಯ ನಡಿಗುಡ್ಡೆ ನಿವಾಸಿ ಕೊರಗಪ್ಪ ಎಂಬವರ ಪುತ್ರಿಯಾಗಿದ್ದು ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಯುವತಿ ಆಕೆಯ ಗೆಳೆಯನೊಂದಿಗೆ ಬೈಕ್‌ನಲ್ಲಿ ಹಿಂಬದಿಯಲ್ಲಿ ಕುಳಿತುಕೊಂಡು ಬರುತ್ತಿದ್ದಳು.

ಈ ವೇಳೆ ಗೆಳೆಯನ ನಿರ್ಲಕ್ಷ್ಯದಿಂದ ಬೈಕ್ ಕೆಎಸ್‌ಆರ್‌ಟಿಸಿ ಬಸ್‌ಗೆ ಹೋಗಿ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.

ಮೃತ ಯುವತಿಯ ಗೆಳೆಯ ಮಾರ್ನಾಡಿನ ರಂಜಿತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *