Breaking
14 May 2026, Thu

ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ವಿಧಿವಶ

ವ್ಯಾಟಿಕನ್ ಸಿಟಿ : ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರುವಾಗಿರುವ ಪೋಪ್ ಫ್ರಾನ್ಸಿಸ್ ಇಂದು ಕೊನೆಯುಸಿರೆಳೆದಿದ್ದಾರೆ.

ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ (88) ಅವರು ತಮ್ಮ ವ್ಯಾಟಿಕನ್ ಸಿಟಿಯಲ್ಲಿರುವ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ರೋಮನ್ ಕ್ಯಾಥೋಲಿಕ್ ಚರ್ಚ್ನ ಮೊದಲ ಲ್ಯಾಟಿನ್ ಅಮೇರಿಕದ ಧರ್ಮಗುರುಗಳಾದ ಪೋಪ್ ಫ್ರಾನ್ಸಿಸ್ ಅವರು ಅನಾರೋಗ್ಯದ ಕಾರಣ ಸತತ ಮೂರನೇ ವರ್ಷ ವಾರ್ಷಿಕ ಗುಡ್ ಫ್ರೈಡೇ ಮೆರವಣಿಗೆಯಲ್ಲಿ ಹಾಜರಾಗಿರಲಿಲ್ಲ.

ಭಾನುವಾರ ಬೆಳಿಗ್ಗೆ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರೊಂದಿಗಿನ ಖಾಸಗಿ ಸಭೆಯಲ್ಲಿ ಪೋಪ್ ಕಾಣಿಸಿಕೊಂಡಿದ್ದರು.

ವೈದ್ಯರು ವಿಶ್ರಾಂತಿಯಲ್ಲಿ ಇರಬೇಕೆಂದು ಸೂಚಿಸಿದ್ದರೂ ಈಸ್ಟರ್ ಭಾನುವಾರದಂದು ಪೋಪ್ ಫ್ರಾನ್ಸಿಸ್ ಭಕ್ತರಿಗೆ ದರ್ಶನ ನೀಡಿದ್ದರು.

Leave a Reply

Your email address will not be published. Required fields are marked *