Breaking
21 Sep 2026, Mon

ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸೇರಿ ಹಲವರು ಗಂಭೀರ

ಬೆಳ್ತಂಗಡಿ : ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು ಸೇರಿದಂತೆ ಹಲವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ- ಅಳದಂಗಡಿಯ ಕೆದ್ದು ಎಂಬಲ್ಲಿ ಏ.21 ರಂದು ನಡೆದಿದೆ.

ಬೆಳ್ತಂಗಡಿಯಿಂದ ಅಳದಂಗಡಿ ಕಡೆ ಬರುತ್ತಿದ್ದ ಕಾರು ಹಾಗು ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಸಾಗುತ್ತಿದ್ದ ಕಾರುಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *