ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಸಹಸವಾರೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದ ಸೂಳಬೆಟ್ಟು ಸನಿಹ ಬೊಕ್ಕಸ ಬಸ್ ನಿಲ್ದಾಣದ ಬಳಿ ಸೋಮವಾರ ತಡರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಕೊಡಿಮಜಲು ನಿವಾಸಿ ಪ್ರತಿಮಾ (37) ಎಂದು ತಿಳಿದು ಬಂದಿದೆ.
ಶಿರ್ಲಾಲುವಿನಲ್ಲಿ ನಡೆಯುತ್ತಿರುವ ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂದೆ ಬರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ




