Breaking
21 Mar 2026, Sat

ಬಂಟ್ವಾಳ: 2 ನೇ ವರ್ಷದ ಗ್ಯಾರಂಟಿ ಸಂಭ್ರಮೋತ್ಸವ: “ಬಡವರ ಜೀವನ ‌ಬೆಳಗುವ ಕಾರ್ಯಕ್ರಮ”: ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್

ಬಂಟ್ವಾಳ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮೂಲಕ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದ್ದು, ಜನಸೇವೆ ಮಾಡಲು ಗಟ್ಟಿ ನಿಲುವು ಹೊಂದಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಅವರ ಕಾಳಜಿಗೆ ನನ್ನ ಒಂದು ಸಲಾಂ ಎಂದು ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.

ಅವರು, ಏ.22ರಂದು ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು , ಪಂಚ ಗ್ಯಾರಂಟಿ ಸರಕಾರಕ್ಕೆ 2 ನೇ ವರ್ಷದ ಸಂಭ್ರಮದ ಪ್ರಯುಕ್ತ ಸಂಭ್ರಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಮೊದಲ ಬಾರಿ ಅದ್ದೂರಿಯಾದ ರೀತಿಯಲ್ಲಿ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಿ ರಾಜ್ಯಕ್ಕೆ ಮಾದರಿಯಾಗಿದ್ದೀರಿ. ಈ ಬಗ್ಗೆ ರಾಜ್ಯದ ಮುಖಮಂತ್ರಿಗಳು, ಉಪಮುಖ್ಯಮಂತ್ರಿಳು ಹಾಗೂ ಯೋಜನೆಯ ರಾಜ್ಯಾಧ್ಯಕ್ಷರು, ನಿಮ್ಮ ಬೆನ್ನು ತಟ್ಟಿ ಪ್ರೋತ್ಸಾಹ ನೀಡುವ ಕಾರ್ಯವನ್ನು ಮಾಡುವಂತೆ ನಾನು ಪತ್ರ ಬರೆಯುವುದಾಗಿ ತಿಳಿಸಿದರು.

ಕಾಂಗ್ರೆಸ್‌ ನ ಗ್ಯಾರಂಟಿ ಯೋಜನೆಯನ್ನು ವಿರೋಧಿಸಿದವರೇ ಇಂದು ಕರ್ನಾಟಕದ ಕಾಂಗ್ರೆಸ್ ಆಡಳಿತವನ್ನು ಕಾಪಿ ಮಾಡಿಕೊಂಡು ಅಧಿಕಾರಕ್ಕೆ ಬರಲು ಯತ್ನಿಸಿದ್ದಾರೆ. ಇಡೀ ದೇಶಕ್ಕೆ ಕರ್ನಾಟಕದಲ್ಲಿ ಆಡಳಿತದಲ್ಲಿರುವ ಕಾಂಗ್ರೇಸ್ ಮಾಡೆಲ್ ಆಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಬಡವರ ಜೀವನವನ್ನು ‌ಬೆಳಕು ಮಾಡುವ ಕಾರ್ಯಕ್ರಮವಾಗಿ ಮೂಡಿಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಕೆ.ಪಿ.ಸಿ.ಸಿ‌ ಪ್ರಧಾನ‌ಕಾರ್ಯದರ್ಶಿ ಕಾಂಗ್ರೆಸ್ ನಾಯಕ ಪದ್ಮರಾಜ್ ಆರ್.ಪೂಜಾರಿ, ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಯೋಜನೆಯ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ, ಜಿ.ಪಂ.ಉಪಕಾರ್ಯದರ್ಶಿ ಕೆ.ಇ.ಜಯರಾಮ್, ಯೋಜನೆಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಸಿಡಿಪಿಒ ಇಲಾಖೆಯ ಉಪನಿರ್ದೇಶಕ ಉಸ್ಮನ್, ಜಿಲ್ಲಾ ಮಟ್ಟದ ಅಧಿಕಾರಿಗಳಾದ ಆನಂದ, ವೈ.ಎಂ.ಬಡಿಗೇರ್, ಬೂಡ ಅಧ್ಯಕ್ಷ ಬೇಬಿ ಕುಂದರ್, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ತಾಲೂಕು ಮಟ್ಟದ ಅಧಿಕಾರಿಗಳಾದ ಪ್ರದೀಪ್ ಡಿ‌ಸೋಜ, ಸಚಿನ್ ಕುಮಾರ್, ಕೆ.ಎಸ್.ಆರ್.ಟಿ.ಸಿ.ನಿಗಮದ ಪುತ್ತೂರು ವಿಭಾಗದ ನಿಯಂತ್ರಣಾಧಿಕಾರಿ ರಾಮಲಿಂಗಯ್ಯ, ಮಂಗಳೂರು ವಿಭಾಗದ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ಮೆಸ್ಕಾಂ ಅಧಿಕಾರಿ ವೆಂಕಟೇಶ್ ಜಿ.ಎಚ್. ಅನಿತಾ , ಸುರೇಖ ಚಂದ್ರಹಾಸ್,ಜೋಕಿಂ.ಡಿ.ಸೋಜ, ತಾಲೂಕು ಸಮಿತಿಗಳ ಅಧ್ಯಕ್ಷರುಗಳಾದ ಸುದೀರ್ ಕುಮಾರ್, ಉಮಾನಾಥ್ ಶೆಟ್ಟಿ, ಸಾಹುಲ್ ಹಮೀದ್, ಪದ್ಮನಾಭ ಸಾಲಿಯಾನ್, ಹಾಗೂ ಬಂಟ್ವಾಳ ತಾಲೂಕು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಮಿತಿ‌ ಸದಸ್ಯ ವಿನಯ ಕುಮಾರ್ ಸಿಂದ್ಯಾ ಸ್ವಾಗತಿಸಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬಂಟ್ವಾಳ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಾಲಕೃಷ್ಣ ಶೆಟ್ಟಿ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *