ಮೂಡುಬಿದಿರೆ: ಮಾರೂರು ವ್ಯಾಪ್ತಿಯ ಬಿರಾವು ಎಂಬಲ್ಲಿ ಏ.22ರ ಸಂಜೆ ಸುರಿದ ಭಾರೀ ಗಾಳಿ, ಮಳೆಗೆ ಅಪಾರ ಹಾನಿಯುಂಟಾಗಿದೆ.
ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದ್ದು, ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯಿಂದ ಮೂಡುಬಿದಿರೆ – ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ಸುಮಾರು 2 ಗಂಟೆಗಳ ಕಾಲ ಬಂದ್ ಆಗಿತ್ತು.

ರಝಾಕ್ ಎಂಬವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ರಸ್ತೆ ಬದಿಯ ವಿದ್ಯುತ್ ತಂತಿಗಳ ಮೇಲೆ ಬೃಹತ್ ಮರಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಈ ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.




