Breaking
19 Sep 2026, Sat

ಪಹಲ್ಗಾಮ್ ನ ಪ್ರವಾಸಿ ತಾಣದ ಮೇಲೆ ಉಗ್ರರ ದಾಳಿ-ಮಂಗಳೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಮಂಗಳೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ ನ ಪ್ರವಾಸಿ ತಾಣದಲ್ಲಿ ಮಂಗಳವಾರ ಉಗ್ರರು ಹಿಂದೂ ಪ್ರವಾಸಿಗರನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.

ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭಾರತೀಯ ಜನತಾ ಪಾರ್ಟಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಕಾಶ್ಮೀರದಲ್ಲಿ ನೆಲೆಸಿದ್ದ ಶಾಂತಿಯನ್ನು ಕದಡುವ ಪ್ರಯತ್ನ ಭಯೋತ್ಪದಾದಕರು ಮಾಡಿದ್ದು, ಇದಕ್ಕೆ ತಕ್ಕ ಉತ್ತರ ಪ್ರಧಾನಮಂತ್ರಿ ಮೋದಿ ನೀಡಲಿದ್ದಾರೆ. ಪಾಕಿಸ್ತಾನಕ್ಕೆ ಸೈನಿಕರನ್ನು ನುಗ್ಗಿಸಿ ಹೊಡೆಸುವ ತಾಕತ್ತು ಪ್ರಧಾನಿಯವರಿಗೆ ಇದೆ ಎಂದರು.

ಇದೇ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ | ಬ್ರಿಜೇಶ್ ಚೌಟ ಅವರು ನವ ಭಾರತದ ಪ್ರಗತಿಯನ್ನು ಸಹಿಸದ ಜೆಹಾದಿ ಶಕ್ತಿಗಳನ್ನು ದೇಶವನ್ನು ಅಸ್ತಿರಗೊಳಿಸಲು ಮಾಡಿದ ಕೃತ್ಯವಾಗಿದೆ. ಇದು ಸಮಸ್ತ ಹಿಂದೂ ಸಮಾಜ, ನಮ್ಮ ಅಸ್ಮಿತೆ ಮತ್ತು ಸಂಸ್ಕೃತಿಯ ಮೇಲೆ ನಡೆದ ದಾಳಿ. ಇಂತಹ ಮಾನಸಿಕತೆಗಳು ದೇಶದ ಎಲ್ಲೇ ಇದ್ದರೂ ಕೊನೆಯ ದಿನಗಳನ್ನು ಎಣಿಸಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭ ಶಾಸಕ ಡಾ| ವೈ ಭರತ್ ಶೆಟ್ಟಿ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮಾಜಿ ಸಚಿವ ನಾಗರಾಜ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾ| ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಮುಖಂಡರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ನಂದನ್ ಮಲ್ಯ, ರಮೇಶ್ ಕಂಡೆಟ್ಟು, ರಾಜೇಶ್ ಕೊಟ್ಟಾರಿ, ಅರುಣ್ ಜಿ.ಶೇಟ್, ಪ್ರೇಮಾನಂದ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *