ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶೂಟೌಟ್

ಮಂಜೇಶ್ವರ : ಬೈಕ್‌ನಲ್ಲಿ ತೆರಳುವ ಸಂದರ್ಭ ಯುವಕನೊಬ್ಬನ ಮೇಲೆ ಶೂಟೌಟ್ ನಡೆದಿರುವ ಘಟನೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಗಡಿಭಾಗ ಮುಡಿಪು ಸಮೀಪದ ಕಜೆಪದವು ಎಂಬಲ್ಲಿ ಭಾನುವಾರ ನಡೆದಿದೆ.

ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್ (20) ಎಂಬಾತನ ಮೇಲೆ ನಿನ್ನೆ ತಡರಾತ್ರಿ ಯಾರೋ ದುಷ್ಕರ್ಮಿಗಳು ಶೂಟೌಟ್ ಮಾಡಿದ್ದಾರೆ. ಭಾನುವಾರ ಸಂಜೆ ವೇಳೆ ಬೈಕ್ ನಲ್ಲಿ ಮನೆ ಕಡೆಗೆ ತೆರಳುವ ಸಂದರ್ಭ ಅವಘಡ ಸಂಭವಿಸಿದೆ. ಈ ವೇಳೆ ಸವಾದ್ ಅವರ ಕಾಲಿಗೆ ಗಂಭೀರ ಪ್ರಮಾಣದ ಗಾಯಾಗಳಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವಾರು ಅನುಮಾನಗಳು ಹುಟ್ಟಿಕೊಂಡಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *