Breaking
22 Mar 2026, Sun

ವಿದ್ಯಾರ್ಥಿನಿಯೊಬ್ಬಳ ಜೊತೆ ಅಸಭ್ಯ ವರ್ತನೆ ಆರೋಪ: ಆರೋಪಿಯ ಬಂಧನ, ಬಿಡುಗಡೆ

ಬೆಳ್ತಂಗಡಿ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವಾಲಿಬಾಲ್ ತರಬೇತಿದಾರನನ್ನು ಬೆಳ್ತಂಗಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾರ್ಕಳ ನಿವಾಸಿ ಸೈಯ್ಯದ್ (24) ಎಂದು ಗುರುತಿಸಲಾಗಿದೆ.

ಆರೋಪಿ ಮೊಬೈಲ್ ಪರಿಶೀಲಿಸಿದಾಗ ಹಲವು ಯುವತಿಯರ ಹಾಗೂ ಆತನ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.ಏ.26 ರಂದು ಆರೋಪಿಯನ್ನು ಬಂಧಿಸಿರುವ ಪೊಲೀಸರು ಮಂಗಳೂರು ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಥಳಿಸಿದವರ ವಿರುದ್ಧ ಆರೋಪಿ ದೂರು

ಆರೋಪಿ ಸೈಯ್ಯದ್ 17 ಹರೆಯ ವಿದ್ಯಾರ್ಥಿನಿಗೆ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮೆಸೇಜ್ ಮಾಡುತ್ತಾ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ಏ.26 ರಂದು ಉಜಿರೆಯಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಥಳಿಸಿದ್ದಾರೆ. ಸದ್ಯ ಆರೋಪಿಯು ತನ್ನ ಮೇಲೆ ಹಲ್ಲೆ ನಡೆಸಿದ ಉಜಿರೆಯ ಪ್ರಜ್ವಲ್ ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿಯ ವಿರುದ್ಧ ದೂರು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *