Breaking
3 Jul 2025, Thu

ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಪುಂಡಾಟ ಮೆರೆದ ಯುವಕರ ತಂಡ : ತನಿಖೆಗೆ ಮುಂದಾದ ಪೊಲೀಸರು

ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ತಂಡ ಪುಂಡಾಟ ಮೆರೆದಿರುವ ಘಟನೆ ಇತ್ತೀಚೆಗೆ ಸುಳ್ಯದಲ್ಲಿ ಬೆಳಕಿಗೆ ಬಂದಿತ್ತು. ಈ ಬಗ್ಗೆ ಪೊಲೀಸರು ಸುಮೋಟೋ ಕೇಸ್‌ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಎ. 27ರ ರಾತ್ರಿ ಕಡಬದಿಂದ ಆಲಂಕಾರು ವರೆಗೆ 15 ಕಿ.ಮೀ. ಉದ್ದಕ್ಕೂ ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಭಾಗದಲ್ಲಿ ಕುಳಿತು ಯುವಕರು ಪುಂಡಾಟ ಮೆರೆದಿದ್ದಾರೆ.

ಈ ಮೊದಲೆ ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಕರ್ಕಶವಾಗಿ ನಿರಂತರ ಹಾರ್ನ್ ಹಾಕುತ್ತಾ ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸಿರುವ ಆರೋಪಗಳು ಸಾರ್ವಜನಿಕರಿಂದ ಕೇಳಿ ಬಂದಿದ್ದು, ಇದಕ್ಕೆ ಪೂರಕ ಎಂಬಂತೆ ಎರಡು ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.

ಪೊಲೀಸರು ಈ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *