Breaking
22 Mar 2026, Sun

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದದ 38ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಸ್ಥೆ ನವೋದಯ ಮಿತ್ರ ಕಲಾ ವೃಂದ (ರಿ) ಹಾಗೂ
ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ, ಇದರ 38ನೇ ವರ್ಷದ ವಾರ್ಷಿಕ ಸವಿ ಸಂಭ್ರಮವು
26 ಎಪ್ರಿಲ್ 2025 ಶನಿವಾರ ನೆತ್ತರಕೆರೆ ಶಾಲಾ ಮೈದಾನದಲ್ಲಿ ನಡೆಯಿತು.

ಅಂದು ಬೆಳಿಗ್ಗೆ ಗಂಟೆ 9-00ಕ್ಕೆ ಅಶ್ವತ್ಥಕಟ್ಟೆಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ಮಧ್ಯಾಹ್ನ ಗಂಟೆ 12-00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಜರುಗಿತು.

ರಾತ್ರಿ ಗಂಟೆ 8-00ಕ್ಕೆ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಕಿಶೋರ್ ಕುಮಾರ್ ಪುತ್ತೂರು ವಿಧಾನ ಪರಿಷತ್ ಸದಸ್ಯರು ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸತೀಶ್ ನಾಯ್ಗ ಕೊಡ್ಮಾಣ್‌ಕೋಡಿ ಅಧ್ಯಕ್ಷರು, ಗ್ರಾ ಪಂ, ಮೇರಮಜಲು, ತಾರಾನಾಥ ಕೊಟ್ಟಾರಿ ಜಿಲ್ಲಾಧ್ಯಕ್ಷರು ಸಂಸ್ಕಾರ ಭಾರತಿ, ಶಾಲಾ ಮುಖ್ಯ ಶಿಕ್ಷಕಿ ಸೇಲ್ವಿಯ ಬ್ರಿಗ್ಸ್, ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಮಾತೃ ಮಂಡಳಿಯ ಅಧ್ಯಕ್ಷೆ ಮಾಲತಿ ಚಂದ್ರಹಾಸ ಇವರು ಉಪಸ್ಥಿತರಿದ್ದು, ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ರವೀಂದ್ರ ಕಂಬಳಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕಲಾ ಪೋಷಕ ಸದಾಶಿವ ಡಿ. ತುಂಬೆ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.

ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಪ್ರತಿಭಾ ಪುರಸ್ಕಾರ ಹಾಗೂ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 2023-24ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ, ದ್ವಿತೀಯ, ತೃತಿಯ ಸ್ಥಾನವನ್ನು ಪಡೆದು ಅತ್ಯುನ್ನತ ಅಂಕಗಳೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನೆ ನಡೆಯಿತು. ವಾರ್ಷಿಕ ಕ್ರೀಡಾಕೂಟದ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು.

ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಯು ಜಿ ಸ್ವಾಗತಿಸಿ, ಸಂಚಾಲಕ ದಾಮೋದರ ನೆತ್ತರಕೆರೆ ಪ್ರಾಸ್ತವಿಕವಾಗಿ ಮಾತನಾಡಿದರು, ಶ್ರೀಧರ್ ಹೆಚ್ ವರದಿ ವಾಚಿಸಿ ವಿಶ್ವನಾಥ ಕುಲಾಲ್ ಸನ್ಮಾನ ಪತ್ರ ವಾಚಿಸಿದರು, ಕು ಅಶ್ವಿನಿ ಬಹುಮಾನಿತರ ಪಟ್ಟಿ ಓದಿದರು, ಮಹೇಶ್ ಶೆಟ್ಟಿಗಾರ್ ವಂದಿಸಿ, ಸಂತೋಷ್ ಕುಲಾಲ್ ನೆತ್ತರಕೆರೆ ಕಾರ್ಯಕ್ರಮ ನಿರೂಪಿಸಿದರು.

ಸಂಜೆ ಗಂಟೆ 6-30ರಿಂದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ, ಕಳ್ಳಿಗೆ ನೆತ್ತರಕೆರೆ ಇಲ್ಲಿನ ಮಕ್ಕಳಿಂದ ನೃತ್ಯ ಸಿಂಚನ ಸಂಜೆ ಗಂಟೆ 7-00ರಿಂದ
ಸಂಘದ ಸದಸ್ಯರು ಮತ್ತು ಮಾತೃ ಮಂಡಳಿಯ ಸದಸ್ಯೆಯರಿಂದ ಭಾರತ ದರ್ಶನ ದೃಶ್ಯರೂಪಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬಳಿಕ ಸಂಘದ ಹಾಗೂ ಅತಿಥಿ ಕಲಾವಿದರ ಅಭಿನಯದ “ಮದಿಮೆದ ಇಲ್ಲಡ್” ಎಂಬ ತುಳು ನಾಟಕ ಪ್ರದರ್ಶನಗೊಂಡಿತು.

Leave a Reply

Your email address will not be published. Required fields are marked *