ಸಾಮಾಜಿಕ‌ ಜಾಲತಾಣದಲ್ಲಿ ದೇಶ ವಿರೋಧಿ ಪೋಸ್ಟ್: ಅಫೀಫ ಫಾತಿಮಾ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಅಫೀಫ ಫಾತಿಮಾ ಎಂಬವರು ದೇಶ ವಿರೋಧಿ ಸಂದೇಶವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ‌

ಪಹಲ್ಗಾಮ್ ಭೀಕರ ಉಗ್ರ ದಾಳಿಯ ಬಳಿಕ ಪಾಕಿಸ್ತಾನ- ಭಾರತದ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಮಧ್ಯೆ ವೈಧ್ಯೆ ಅಫೀಫ ಫಾತಿಮಾ ಅವರು ಸೋಷಿಯಲ್ ಮೀಡಿಯಾದಲ್ಲಿ ” ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು‌ ಬರೆದುಕೊಂಡಿದ್ದಾರೆ.

ಈ ಕುರಿತು ಮಂಗಳೂರು‌ ನಗರದ ಪಾಂಡೇಶ್ವರ ಪೊಲೀಸ್ ಠಾಣೆಗೆ ಹೈಲ್ಯಾಂಡ್ ಆಸ್ಪತ್ರೆಯ ಹೆಚ್​ಆರ್​ ಮೊಹಮ್ಮದ್ ಅಸ್ಲಾಂ ದೂರು ನೀಡಿದ್ದು ಪೊಲೀಸರು ಬಿಎನ್​ಎಸ್​​ ಕಲಂ 196(1)(a), 353(2) ಅಡಿಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೈಲ್ಯಾಂಡ್ ಆಸ್ಪತ್ರೆ ಆಡಳಿತ ಮಂಡಳಿ ವೈದ್ಯೆಯನ್ನು ಕೆಲಸದಿಂದ ವಜಾಗೊಳಿಸಿದೆ.

ಪೋಸ್ಟ್ ವೈರಲ್ ಆದ ಬೆನ್ನಲ್ಲೆ ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

Leave a Reply

Your email address will not be published. Required fields are marked *