Breaking
21 Mar 2026, Sat

ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ವತಿಯಿಂದ ಪ್ರಭಾಕರ. ಹೆಚ್ ಇವರಿಗೆ ಅಭಿನಂದನೆ

ಬಂಟ್ವಾಳ: ದಕ್ಷಿಣ ಕನ್ನಡ ಸಹಕಾರಿ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಪುತ್ತೂರು ವಿಭಾಗದಿಂದ ಚುನಾಯಿತಗೊಂಡು ದ. ಕ.ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ ಆಯ್ಕೆಯಾದ ಸಿದ್ದಕಟ್ಟೆ ಸಹಕಾರ ಸಂಘದ ಸದಸ್ಯರಾಗಿರುವ ಬೆಳ್ತಂಗಡಿ ತಾಲೂಕು ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಹೆಚ್.‌ ರವರನ್ನು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು.

ಕಾರ್ಯಕ್ರದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಜಾರಪ್ಪ ನಾಯ್ಕ, ವಿಶ್ವನಾಥ ಶೆಟ್ಟಿಗಾರ್, ಶಿವ ಗೌಡ, ಮಂದಾರತಿ ಎಸ್. ಶೆಟ್ಟಿ, ಪುಷ್ಪಲತಾ ಎಸ್ ಆರ್, ಸಂಘದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಆರಂಬೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ಶೆಟ್ಟಿ , ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *