ಪುತ್ತೂರು : ಮನೆಯ ಬದಿಯಲ್ಲಿ ಹಾದು ಹೋಗಿದ್ದ ಕೊಳವೆಬಾವಿ ಸಂಪರ್ಕದ ವಿದ್ಯುತ್ ತಂತಿ ಶಾಕ್ ಹೊಡೆದು ಅರಿಯಡ್ಕ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಏ.30ರಂದು ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಬೇಂಗತ್ತಡ್ಕ ನಿವಾಸಿ ದೇವಪ್ಪ ನಾಯ್ಕ ಅವರ ಪತ್ನಿ ಭಾಗೀರಥಿ (59) ಎಂದು ಗುರುತಿಸಲಾಗಿದೆ.

ಮನೆಯ ತಾರಸಿಯ ಒಂದು ಬದಿಯಲ್ಲಿ ಮಳೆ ನೀರು ತುಂಬಿಕೊಂಡಿತ್ತು. ಈ ಸಂದರ್ಭ ಭಾಗೀರಥಿ ಅವರು ತಾರಸಿಗೆ ಹೋಗಿ ಸ್ವಚ್ಛ ಮಾಡುತ್ತಿದ್ದ ವೇಳೆ ಮನೆಯ ಬದಿಯಲ್ಲಿ ಹಾದು ಹೋಗಿದ್ದ ಕೊಳವೆಬಾವಿ ಸಂಪರ್ಕದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ್ದಾರೆ. ಈ ವೇಳೆ ವಿದ್ಯುತ್ ಶಾಕ್ ಹೊಡೆದು ಕೊನೆಯುಸಿರೆಳೆದಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.


