Breaking
21 Jun 2026, Sun

ಕುಡುಪು: ಗುಂಪು ಹತ್ಯೆ ಪ್ರಕರಣ: ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಸೇರಿ ಮೂವರು ಅಮಾನತು

ಮಂಗಳೂರು: ಕುಡುಪು ಗುಂಪು ಹತ್ಯೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಪೊಲೀಸರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರು ಅಮಾನತ್ತುಗೊಳಿಸಿದ್ದಾರೆ.

ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ ಸ್ಟೇಬಲ್ ಚಂದ್ರ ಪಿ, ಕಾನ್ ಸ್ಟೇಬಲ್ ಯಲ್ಲಾಲಿಂಗ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ಶಿಸ್ತು ಕ್ರಮ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.

ಗುಂಪು ಹತ್ಯೆಯ ಬಗ್ಗೆ ತಿಳಿದಿದ್ದರೂ ಮೇಲಾಧಿಕಾರಿಗಳ ಗಮನಕ್ಕೆ ತಾರದೆ,‌ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಕಲೆ‌ ಹಾಕದೆ ನಿರ್ಲಕ್ಷ್ಯ ತೋರಿಸಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *