ಮೇ 02: ಎಸ್​ಎಸ್​ಎಲ್ ಸಿ ಪರೀಕ್ಷೆ ಫ‌ಲಿತಾಂಶ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ -1ರ ಫ‌ಲಿತಾಂಶ ಮೇ 02 ಶುಕ್ರವಾರ ಪ್ರಕಟವಾಗಲಿದೆ.

ಬೆಳಗ್ಗೆ 11.30ಕ್ಕೆ ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದ್ದು, ಮಧ್ಯಾಹ್ನ 12.30ರ ಬಳಿಕ karresults.nic.in ವೆಬ್‌ ಸೈಟ್‌ ನಲ್ಲಿ ಫಲಿತಾಂಶವನ್ನು ನೋಡಬಹುದು.

ಈ ವರ್ಷ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಿದ್ದು, ರಾಜ್ಯಾದ್ಯಂತ ಸುಮಾರು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಮೌಲ್ಯಮಾಪನ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಿರುವ KSEAB, ಫಲಿತಾಂಶವನ್ನು ಆನ್‌ಲೈನ್‌ನಲ್ಲಿ (Online Results) ಪ್ರಕಟಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ

Leave a Reply

Your email address will not be published. Required fields are marked *