Breaking
7 Aug 2026, Fri

ಬಜ್ಪೆ : ಸುಹಾಸ್ ಶೆಟ್ಟಿ ಕೊಲೆ, ಇಂದು ದ.ಕ ಜಿಲ್ಲಾ ಬಂದ್ ಗೆ ಹಿಂದೂ ಸಂಘಟನೆಗಳಿಂದ ಕರೆ: ಹೆಚ್ಚುವರಿ ಪೊಲೀಸರ ನಿಯೋಜನೆ

ಮಂಗಳೂರು: ನಿನ್ನೆ ರಾತ್ರಿ ಬಜ್ಪೆಯಲ್ಲಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಹಿಂಪ ಕರೆ ನೀಡಿದೆ.

ಈ ಸಂಧರ್ಭದಲ್ಲಿ ಎಲ್ಲಾ ವ್ಯಾಪಾರ, ವಹಿವಾಟು ಬಂದ್ ಮಾಡಲು ವಿಹಿಂಪ ಕರೆ ನೀಡಿದೆ.ಸುಹಾಸ್ ಶೆಟ್ಟಿ ತನ್ನ ಸಹಚರರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿ ಹತ್ಯೆ ಮಾಡಲಾಗಿದೆ ಇದೊಂದು ಪೂರ್ವನಿಯೋಜಿತ ಹತ್ಯೆ ಎಂದು ವಿಹಿಂಪ ಮುಖಂಡ ಶರಣ್ ಪಂಪವೆಲ್ ಕಿಡಿಕಾರಿದ್ದಾರೆ.

ಸಂಘಟನೆಗಳು ಬಂದ್ ಗೆ ಕರೆ ನೀಡಿದ ಹಿನ್ನಲೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *