Breaking
10 Nov 2026, Tue

ಬಜ್ಪೆ ಕೊಲೆ ಪ್ರಕರಣ ದುಷ್ಕರ್ಮಿಗಳ ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ ಸಭಾಧ್ಯಕ್ಷ ಯು.ಟಿ.ಖಾದರ್

ಮಂಗಳೂರು: ಬಜ್ಪೆ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ದುಷ್ಕರ್ಮಿಗಳ ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.

ಮಂಗಳೂರಿನ ಬಜ್ಪೆ ಕಿನ್ನಿಪದವು ಪ್ರದೇಶದಲ್ಲಿ ಸುಹಾಸ್ ಎಂಬವರ ಕೊಲೆ ನಡೆದಿದ್ದು ,ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ,ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಿದ ಯು.ಟಿ ಖಾದರ್ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *