ಬಜ್ಪೆ: ಮೇ.1 ರಂದು ರಾತ್ರಿ ದುಷ್ಕರ್ಮಿಗಳಿಂದ ಕೊಲೆಯಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.
ಈಗಾಗಲೇ ಈ ವಿಚಾರಕ್ಕೆ ಸಂಬಂಧಪಟ್ಟಂತೆ 8 ಮಂದಿ ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

ಇತ್ತ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ರಾಜಕೀಯ ವಲಯದಲ್ಲಿ ಕೋಲಾಹಲವನ್ನು ಎಬ್ಬಿಸಿದೆ.
ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ನಂತರ ನಡೆದ ಮಹತ್ವದ ಬೆಳವಣಿಗೆಯಲ್ಲಿ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಆರೋಪಿಗಳು ಮಂಗಳೂರಿನಲ್ಲೇ ಅವಿತ್ತಿದ್ದರು ಎಂದು ತಿಳಿದು ಬಂದಿದೆ.
ಇವತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಆರೋಪಿಗಳ ವಿವರ ನೀಡುವ ಸಾಧ್ಯತೆಯಿದೆ ಇದೆ ಎಂದು ಹೇಳಲಾಗುತ್ತಿದೆ.
ಈ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.



