ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದಾಗಿ ಅವಿಭಜಿತ ಜಿಲ್ಲೆಗಳ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ.
ಈ ಮಧ್ಯೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.

11 ಗಂಟೆಗೆ ಕಾನೂನು ಸುವ್ಯವಸ್ಥೆ ಸಂಬಂಧ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಬಳಿಕ 12 ಗಂಟೆಗೆ ಸಚಿವರು ಮಹತ್ವದ ಸುದಿಗೋಷ್ಠಿಯನ್ನು ನಡೆಸಲಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

