Breaking
23 Mar 2026, Mon

ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ಹಿನ್ನಲೆ ಬಗ್ಗೆ ತನಿಖೆ : ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

ಮಂಗಳೂರು: ನಗರದ ಬಜಪೆ ಸಮೀಪದ ಕಿನ್ನಿಪದವಿನಲ್ಲಿ ಹಿಂದೂ ಮುಖಂಡ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಗುರುವಾರದಂದು ನಡೆದ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಂಟು ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಆರೋಪಿಗಳ ಹಿನ್ನೆಲೆ, ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಕೋಮು ಗಲಭೆ ತಡೆಯಲು ಹೊಸ ಟಾಸ್ಕ್ ಪೋರ್ಸ್ ಕೋಮು ನಿಗ್ರಹ ಕಾರ್ಯಪಡೆ ರಚನೆ ಮಾಡಲಾಗುತ್ತದೆ.

ಈ ಎರಡು ಜಿಲ್ಲೆಗೆ ಮಾತ್ರ ಇದು ಸೀಮಿತವಾಗಿರುತ್ತದೆ.

ಪ್ರತ್ಯೇಕವಾಗಿ ಆ್ಯಂಟಿ ನಕ್ಸಲ್ ಫೋರ್ಸ್ ನಂತೆ ಆ್ಯಂಟಿ ಕಮ್ಯುನಲ್ ಫೋರ್ಸ್ ಕೆಲಸ ಮಾಡುತ್ತದೆ.

ರೆಗ್ಯುಲರ್ ಪೊಲೀಸರೊಂದಿಗೆ ಸಮನ್ವಯದೊಂದಿಗೆ ಇದು ಕೆಲಸ ಮಾಡಲಿದೆ ಎಂದರು.

Leave a Reply

Your email address will not be published. Required fields are marked *